BIG NEWS : ಕಾಂಗ್ರೆಸ್‌ಗೆ ಬಿಗ್‌ ಶಾಕ್‌: “ನಾಗರಾಜ್ ಛಬ್ಬಿ” ನಾಳೆ ರಾಜೀನಾಮೆ

You are currently viewing BIG NEWS : ಕಾಂಗ್ರೆಸ್‌ಗೆ ಬಿಗ್‌ ಶಾಕ್‌: “ನಾಗರಾಜ್ ಛಬ್ಬಿ”  ನಾಳೆ ರಾಜೀನಾಮೆ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಇಂದು ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟವಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್ ಗೆ ಟಿಕೆಟ್ ನೀಡಿದ ಹಿನ್ನೆಲೆ “ನಾಗರಾಜ್ ಛಬ್ಬಿ” ಅಸಮಾಧಾನಗೊಂಡಿದ್ದು, ಅವರು ಕಾಂಗ್ರೆಸ್ ಗೆ ನಾಳೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಅದೇ ರೀತಿ ಕೆಪಿಸಿಸಿ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದೇನೆ ಎಂದು ನಾಗರಾಜ್ ಛಬ್ಬಿ ಘೋಷಣೆ ಮಾಡಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಚಿತ್ರದುರ್ಗ, ಕಲಘಟಕಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತವಾಗಿದ್ದು, ಕಾಂಗ್ರೆಸ್‌ನ ರಾಜೀನಾಮೆ ಪರ್ವ ಈ ಮೂಲಕ ಶುರುವಾಗಲಿದೆ.

Leave a Reply

error: Content is protected !!