ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಶಿರಹಟ್ಟಿ: ನಗರದ ಭಾರತೀಯ ಜನತಾ ಪಕ್ಷದ ನಗರ ಘಟಕ ಆಶ್ರಯದಲ್ಲಿ ಪಕ್ಷದ ಕಾರ್ಯಾಲಯ ಶಾಸಕರ ಸ್ವಗೃಹದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಜರಗಿತು.
ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕ ಡಾ ಚಂದ್ರು ಲಮಾಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವು ನಗರ ಘಟಕದ ಅಧ್ಯಕ್ಷ ನಾಗರಾಜ್ ಲಕ್ಕುಂಡಿ ಅವರ ನೇತೃತ್ವದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದಂತ ಫಕೀರೇಶ್ವರ ರಟ್ಟಿಹಳ್ಳಿ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಕ್ಬರ್ ಸಾಬ್ ಯಾದಗಿರಿ ನಗರ ಎಸ್ ಟಿ ಮೋರ್ಚಾ ಅಧ್ಯಕ್ಷ ಬಸವರಾಜ ತಳವಾರ್ ನಗರ ಘಟಕ ಪ್ರಧಾನ ಕಾರ್ಯದರ್ಶಿ ಬಸವರಾಜ್ ವಡವಿ ನಾಗರಾಜ್ ತಳವಾರ ಲಕ್ಷ್ಮಣ ಬಾರಬಾರ್ ಫಕಿರೇಶ್ ತಳವಾರ್ ಶಿವು ತಳವಾರ್ ಶಿವಕುಮಾರ್ ತಳವಾರ್ ಬನ್ನಿಕೊಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.