ಬಿಜೆಪಿಯ ಹಿರಿಯ ನಾಯಕ ಸಿಪಿ ಯೋಗೇಶ್ವರ್ ಬಿಜೆಪಿಗೆ ಬಿಗ್ ಶಾಕ್…: ಸಿಪಿವೈ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣೆ ಸದ್ದು ಮಾಡುತ್ತಿದ್ದು, ಇದೀಗ ಚನ್ನಪಟ್ಟಣದ ಉಪಚುನಾವಣೆಗೆ ಎನ್.ಡಿ.ಎ ಒಕ್ಕೂಟದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಸಿಪಿ ಯೋಗೇಶ್ವರ್ ಅವರು ತಮ್ಮ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈಗಸಿಪಿವೈ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಸಮಾಧಾನಗೊಂಡಿದ್ದ ಯೋಗೇಶ್ವರ್ ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.