ಮುಂಡರಗಿ : ಗದಗ ಜಿಲ್ಲೆಯ ಮುಂಡರಗಿ ತಾಲೂಕು ಸಿಂಗಟಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಸಿಂಗಟಾಲೂರು ಗ್ರಾಮ ಪಂಚಾಯತ್, ಸಂತೆ ಬಜಾರ ಮತ್ತು ಪ್ರಾಥಮಿಕ ಶಾಲೆಯನ್ನು ಸಂಪರ್ಕಿಸುವ 30ಫೂಟ್ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆ ಹಾಗೂ ಕಟ್ಟಡಗಳು
ದಲಿತ ಕುಟುಂಬಗಳು, ಶಾಲಾ ಮಕ್ಕಳ ಸಂಚಾರಕ್ಕೆ ತೊಂದರೆಯಾಗಿದ್ದ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಈ ಸಂಬಂಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಂಬಂಧ ಪಟ್ಟ ಕುಟುಂಬಗಳಿಗೆ ನೋಟಿಸ್ ಹೊರಡಿಸಿ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡ ತೆರವುಗಳಿಸಲು ಆದೇಶಿಸಲಾಗಿತ್ತು.
ಕಟ್ಟಡ ತೆರವುಗೊಳಿಸುವಂತೆ ಗ್ರಾಮ ಪಂಚಾಯಿತಿಯಿಂದ ಹಲವು ಬಾರಿ ಸಂಬಂಧ ಪಟ್ಟ ಕುಟುಂಬಗಳಿಗೆ ನೋಟಿಸ್ ನೀಡಲಾಗಿತ್ತು.
ಕಟ್ಟಡ ತೆರವುಗೊಳಿಸದೆ ಇದ್ದುದರಿಂದ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಜೆ.ಸಿ.ಬಿ ಬಳಸಿ ತೆರವು ಕಾರ್ಯಾಚರಣೆ ನಡೆಸಿದರು.
ವರುಣನ ಆವಾಂತರದಿಂದ ಆಮೆಗತಿಯಲ್ಲಿ ಸಾಗಿದ ಕಾರ್ಯಾಚರಣೆ!
ವಸ್ತುಗಳ ಸ್ಥಳಾಂತರಕ್ಕೆ ಕಾಲಾವಕಾಶ ಕೋರಿದ ಕುಟುಂಬಗಳು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಕಾರ್ಯಾನಿರ್ವಾಹಕ ಅಧಿಕಾರಿಗಳು. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕೈಗೊಳ್ಳುವಂತೆ ಕ್ರಮವಹಿಸಲು ಸೂಚನೆ ನೀಡಿದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಅರುಣಾ.ಸೊರಗಾವಿ ಮಾತನಾಡಿ ಯಾರು ಅನಾವಶ್ಯಕ ಮಧ್ಯಸ್ಥಿಕೆ ವಹಿಸದೆ ನ್ಯಾಯ ಸಮ್ಮತ ತೆರವು ಕಾರ್ಯಾಚರಣೆಗೆ ಸಹಕರಿಸುವಂತೆ ಸ್ಥಳೀಯರ ಮನವೊಲಿಸಿದರು.
ಮುಂದಿನ ಹಂತದಲ್ಲಿ ಗ್ರಾಮದ ನಕಾಶೆಯಲ್ಲಿರುವಂತೆ 30ಫೂಟ್ ರಸ್ತೆ ತೆರವು ಕಾರ್ಯಾಚರಣೆ ಮುಂದುವರೆಯಬೇಕಿದೆ.