BREAKING : ಕೊಪ್ಪಳದ ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ : ಬರೋಬ್ಬರಿ 98 ಅಪಧಾರಿಗಳಿಗೆ ಜೀವಾವಧಿ ಶಿಕ್ಷೆ!!

You are currently viewing BREAKING : ಕೊಪ್ಪಳದ ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ : ಬರೋಬ್ಬರಿ 98 ಅಪಧಾರಿಗಳಿಗೆ ಜೀವಾವಧಿ ಶಿಕ್ಷೆ!!

ಪ್ರಜಾವೀಕ್ಷಣೆ ಸುದ್ದಿಜಾಲ :- 

BREAKING : ಕೊಪ್ಪಳದ ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ : ಬರೋಬ್ಬರಿ 98 ಅಪಧಾರಿಗಳಿಗೆ ಜೀವಾವಧಿ ಶಿಕ್ಷೆ!!

ಕೊಪ್ಪಳ : ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ಮದ್ಯ ನಡೆದ ಜಾತಿ ಸಂಘರ್ಷದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐತಿಹಾಸಿಕ ತೀರ್ಪು ನ್ಯಾಯಾಲದಿಂದ ಪ್ರಕಣೆಯಾಗಿದೆ. ಇದೀಗ ಒಟ್ಟು 101 ಜನ ಅಪರಾಧಿಗಳ ಪೈಕಿ ಬರೋಬ್ಬರಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ತಲಾ ಒಬ್ಬರಿಗಂತೆ 5000 ರೂಪಾಯಿ ದಂಡ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಉಳಿದಂತಹ  ಮೂವರು ಅಪರಾಧಿಗಳಿಗೆ ತಲಾ 2000 ದಂಡ ಹಾಗೂ 5 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ಚಂದ್ರಶೇಖರ ಸಿ. ಆದೇಶ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 117 ಜನ ಆರೋಪಿಗಳಿದ್ದರು. ಇದರಲ್ಲಿ 101 ಜನರ ಮೇಲಿನ ಆರೋಪ ದೃಢಪಟ್ಟಿದೆ. ಇದರಲ್ಲಿ ಭಾಗಿಯಾಗಿದ್ದ ಕೆಲವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಇದೆ.

Leave a Reply

error: Content is protected !!