BIG NEWS : ವಕ್ಫ್ ನೋಟಿಸ್ ಹಿಂಪಡೆಯಲು ಸರ್ಕಾರದ ನಿರ್ಧಾರ..!!
*ರೈತರ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ಅಧಿಕಾರಿಗಳಿಗೆ ಸರ್ಕಾರದಿಂದ ಸೂಚನೆ..!!
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲ ರೈತರ ಆಸ್ತಿಗಳಿಗೆ ವಕ್ಫ್ ಆಸ್ತಿ ಎಂದು ನಮೂದಿಸಲು ನೀಡಿರುವ ನೋಟಿಸ್‌ನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಕಂದಾಯ ಅಧಿಕಾರಿಗಳು ಸರ್ಕಾರ ಆದೇಶ ಹೊರಡಿಸಿದೆ.
ರೈತರಲ್ಲಿ ಸ್ವಲ್ಪ ನಿರಾಳತೆ ಹೊಂದಿದ್ದಾರೆ. ಹಾಗಾದರೆ ಸರ್ಕಾರದ ಆದೇಶದಲ್ಲಿ ಇರುವ ಅಂಶಗಳು ಹೀಗಿವೆ.
1. ರೈತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುವ ಸಂಬAಧ ನೀಡಿರುವ ಎಲ್ಲ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು.
2. ಖಾತೆ ಬದಲಾವಣೆ ಕುರಿತು ಯಾವುದೇ ಕಚೇರಿ ಹಾಗೂ ಪ್ರಾಧಿಕಾರಗಳಿಂದ ನೀಡಿದ ನಿರ್ದೇಶನಗಳನ್ನೂ ಕೂಡಲೇ ವಾಪಸ್ ಪಡೆಯಬೇಕು.
3. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರೈತರ ವಿರುದ್ದ ಕ್ರಮ ಜರುಗಿಸಬಾರದು.
4. ನೋಟಿಸ್ ಹಿಂಪಡೆಯಲು ಸಿಎಂ ಆದೇಶಿಸಿದ ಹೊರತಾ ಗಿಯೂ 2ನೇ ನೆನಪೋಲೆ ಹೊರಡಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ.
ಮೇಲಿನ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಕಂದಾಯ ಅಧಿಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಅಪರ ಕಾರ್ಯದರ್ಶಿ ಡಾ.ಬಿ ಉದಯ ಕುಮಾರ್ ಶೆಟ್ಟಿ ಆದೇಶವನ್ನು ಹೊರಡಿಸಿದ್ದಾರೆ.