GOOD NEWS : ರೈತರಿಗೆ ಸರ್ಕಾರದಿಂದ ಗುಡ್‌ ನ್ಯೂಸ್: ಹೆಸರು ಕಾಳು ಖರೀದಿಯ ಅವಧಿ‌ ಮತ್ತೆ ವಿಸ್ತರಣೆ..!

You are currently viewing GOOD NEWS : ರೈತರಿಗೆ ಸರ್ಕಾರದಿಂದ ಗುಡ್‌ ನ್ಯೂಸ್: ಹೆಸರು ಕಾಳು ಖರೀದಿಯ ಅವಧಿ‌ ಮತ್ತೆ ವಿಸ್ತರಣೆ..!

ಪ್ರಜಾ ವೀಕ್ಷಣೆ ಸುದ್ದಿಜಾಲ :-

GOOD NEWS : ರೈತರಿಗೆ ಸರ್ಕಾರದಿಂದ ಗುಡ್‌ ನ್ಯೂಸ್: ಹೆಸರು ಕಾಳು ಖರೀದಿಯ ಅವಧಿ‌ ಮತ್ತೆ ವಿಸ್ತರಣೆ..!

ಪ್ರಜಾ ವೀಕ್ಷಣೆ ನ್ಯೂಸ್ ಡೆಸ್ಕ್ : ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರ ವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!