STATE NEWS : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!
ಪ್ರಜಾ ವೀಕ್ಷಣೆ ನ್ಯೂಸ್ ಡೆಸ್ಕ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವ್ಯಾಪ್ತಿಯಲ್ಲಿನ 20 ಜಿಲ್ಲೆಗಳಿಗೆ ಎ.ಎನ್.ಎಂ ತರಬೇತಿ ಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಜಿಲ್ಲೆಗಳಾದ ಬಳ್ಳಾರಿ, ಬೆಳಗಾವಿ, ವಿಜಯಪುರ, ಚಿತ್ರದುರ್ಗ, ಚಿಕ್ಕಮಗಳೂರು, ಧಾರವಾಡ, ಹಾಸನ, ಕೋಲಾರ, ಮಡಿಕೇರಿ, ಮೈಸೂರು, ಮಂಗಳೂರು, ರಾಯಚೂರು, ಶಿವಮೊಗ್ಗ, ತುಮಕೂರು, ಕಲುಬುರ್ಗಿ, ರಾಮನಗರ, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಚಿಕ್ಕಬಳ್ಳಾಪುರ ಎ.ಎನ್.ಎಂ ತರಬೇತಿ ಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ (ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ) ತರಬೇತಿ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿರ್ದೇಶಕ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು ಇವರು ತಿಳಿಸಿದ್ದಾರೆ.
ಈ ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಅಥವಾ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರುಗಳು ಅಥವಾ ಪ್ರಾಂಶುಪಾಲರು, ಸರ್ಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಇವರನ್ನು ಸಂಪರ್ಕಿಸುವುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವಂಬರ್ 30ರ ಸಂಜೆ 5.30 ಗಂಟೆ ಒಳಗೆ ದ್ವಿ ಪ್ರತಿಯಲ್ಲಿ ಭರ್ತಿಮಾಡಿ ಸೂಕ್ತದಾಖಲಾತಿಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ https://hfwcom.karnataka.gov.in ಮತ್ತು ನಿರ್ದೇಶಕರು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಬೆಂಗಳೂರು. ದೂರವಾಣಿ ಸಂಖ್ಯೆ 080-23206125/6 E-mail: directorsihfw.bg@gmail.com ಸಂಪರ್ಕಿಸಬಹುದು.