SPECIAL DAY 2024 : ಇಂದು ದಾಸ ಶ್ರೇಷ್ಠ, ಭಕ್ತ ಶ್ರೀ ಕನಕದಾಸರ ಜಯಂತಿಯ ಶುಭಾಶಯಗಳು

You are currently viewing SPECIAL DAY 2024 : ಇಂದು ದಾಸ ಶ್ರೇಷ್ಠ, ಭಕ್ತ ಶ್ರೀ ಕನಕದಾಸರ ಜಯಂತಿಯ ಶುಭಾಶಯಗಳು

ಪ್ರಜಾ ವೀಕ್ಷಣೆ ಸುದ್ದಿಜಾಲ :-

SPECIAL DAY 2024 : ಇಂದು ದಾಸ ಶ್ರೇಷ್ಠ, ಭಕ್ತ ಶ್ರೀ ಕನಕದಾಸರ ಜಯಂತಿಯ ಶುಭಾಶಯಗಳು

ಪ್ರಜಾವೀಕ್ಷಣೆ ನ್ಯೂಸ್‌ ಡೆಸ್ಕ್‌ : ದಾಸ ಶ್ರೇಷ್ಠ, ಭಕ್ತ ಶ್ರೀ ಕನಕದಾಸರ ಮೂಲ ಹೆಸರು ತಿಮ್ಮಪ್ಪನಾಯಕ (1508-1606) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದರು.

ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಹಿಂದೂ ಕುರುಬ /ನಾಯಕ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು.  15-16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.

ಇವರು ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು ಎಂದರೆ. ಹಾಗೆಯೇ  ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

ಕನಕದಾಸರು ಮತ್ತುಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾಗಿದ್ದರು.

ಕನಕ ದಾಸರ ಸಾಹಿತ್ಯ ರಚನೆ

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

  1. ಮೊಹನತರಂಗಿಣಿ

  2. ನಳಚರಿತ್ರೆ

  3. ರಾಮಧ್ಯಾನ ಚರಿತೆ

  4. ಹರಿಭಕ್ತಸಾರ

  5. ನೃಸಿಂಹಸ್ತವ

 

Leave a Reply

error: Content is protected !!