ಪ್ರಜಾ ವೀಕ್ಷಣೆ ಡೆಸ್ಕ್ :-
BIG NEWS : ಮತದಾರರ ಪಟ್ಟಿಯಲ್ಲಿ ವಿಶೇಷ ಪರಿಷ್ಕರಣೆ ಕಾರ್ಯ ಆರಂಭ : ನ.28ಕ್ಕೆ ಹಕ್ಕು, ಆಕ್ಷೆಪಣೆ ಸಲ್ಲಿಸಲು ಕೊನೆಯ ದಿನ!
ಬೆಂಗಳೂರು : ರಾಜ್ಯದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮಹತ್ವದ ಅಪ್‌ಡೆಟ್ ನೀಡಲಾಗಿದ್ದು, ಇದೀಗ ರಾಜ್ಯದಲ್ಲಿ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ವಿಶೇಷ ಪರಿಷ್ಕರಣೆ ಕಾರ್ಯ ಆರಂಭವಾಗಿದೆ. ರಾಜ್ಯದ ಚುನಾವಣಾ ಅಧಿಕಾರಿಗಳು ಮತದಾರರ ಕರಡು ಪ್ರತಿಯನ್ನು ಪ್ರಕಟಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮುಂದಿನ (2025) ವರ್ಷ ಜನವರಿ 1ರಂದು ಅರ್ಹ ದಿನಾಂಕವೆಂದು ಪರಿಗಣಿಸಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿ ಪ್ರಕಟಿಸಿದೆ.
ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಕರಡು ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳಲ್ಲಿ ಹಾಗೂ ಪ್ರತಿ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ www.ceokarnataka.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಆಯಾ ವಿಧಾನಸಭಾ ಮತಕ್ಷೇತ್ರದಲ್ಲಿ ನಿಗದಿಪಡಿಸಿದ ಮತಗಟ್ಟೆಗಳಲ್ಲಿ ಅಥವಾ ಸಂಬಂಧಿಸಿದ ಕಚೇರಿಗಳ ವೇಳೆಯಲ್ಲಿ ಅಕ್ಟೊಬರ 29 ರಿಂದ ನವೆಂಬರ್ 28 ರ ವರೆಗೆ ಮತದಾರರ ಪರಿಶೀಲನೆಗಾಗಿ ಲಭ್ಯವಿರುತ್ತದೆ. ಈ ಕಾಲಾವಕಾಶದಲ್ಲಿ ಮತದಾರರು ಮತದಾರರ ಯಾದಿ ಪರಿಶೀಲಿಸಿ, ಮತದಾರಪಟ್ಟಿಗೆ ಹಕ್ಕು ಮತ್ತು ಆಕ್ಷಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿದು ಬಂದಿದೆ.
ಹೊಸದಾಗಿ ಹೆಸರು ಸೆರ್ಪಡೆಗೆ ಅರ್ಜಿ ನಮೂನೆ 6
2025ರ ಜನವರಿ 1ರಂತೆ 18 ವರ್ಷ ವಯಸ್ಸು ಪೂರ್ಣಗೊಂಡಿರುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ. 6 ರಲ್ಲಿ ಸಲ್ಲಿಸಬಹುದು. 2025ನೇ ವರ್ಷದ ಅರ್ಹತಾ ದಿನಾಂಕಗಳಾದ 1 ನೇ ಏಪ್ರಿಲ್, 2025, 1ನೇ ಜುಲೈ, 2025 ಅಥವಾ ಅಕ್ಟೋಬರ್ 2025ಕ್ಕೆ 18 ವರ್ಷ ವಯಸ್ಸು ಪೂರ್ಣಗೊಳ್ಳುವವರು, ಕರಡು ಮತದಾರ ಪಟ್ಟಿ ಪ್ರಕಟಣೆ ಈ ದಿನಾಂಕದಿಂದ ನಮೂನೆ 6 ರಲ್ಲಿ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಈ ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲಾಗುವುದು. ಮತದಾರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರನು ಅರ್ಜಿಗೆ ಇತ್ತೀಚಿನ ಪಾಸ್‌ಪೋರ್ಟ ಸೈಜ್ ಫೋಟೋ ಹಾಗೂ ವಿಳಾಸದ ಬಗ್ಗೆ ದಾಖಲೆಗಳು ಹಾಗೂ ವಯಸ್ಸಿನ ಬಗ್ಗೆ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಹೆಸರು ತೆಗೆದು ಹಾಕಲು ಅರ್ಜಿ ನಮೂನೆ ನಂ.7
ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ವಿಚಾರವಾಗಿ ಅರ್ಜಿ ನಮೂನೆ ನಂ. 7 ರಲ್ಲಿ ಅರ್ಜಿ ಸಲ್ಲಿಸುವುದು.
ಅರ್ಜಿ ನಮೂನೆ ನಂ. 8