ಯುವನಿಧಿ ಸೌಲಭ್ಯಕ್ಕೆ ಆರ್ಹ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಿ : ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ
ವಿಜಯನಗರ (ಹೊಸಪೇಟೆ) : ರಾಜ್ಯ ಸರ್ಕಾರ ಪದವಿ ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿಗಳ ಭವಿಷ್ಯಕ್ಕಾಗಿ ಯುವನಿಧಿ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, 2023-24ನೇ ಸಾಲಿನಲ್ಲಿ ಉತ್ತೀರ್ಣರಾದ ಆರ್ಹ ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಬಹುದಾಗಿದೆ.
ಯುವನಿಧಿ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳಿಗೆ ಪದವಿ/ಸ್ನಾತಕೊತ್ತರ ಪದವಿ ಪಡೆದ ಆಭ್ಯರ್ಥಿಗೆ ಮಾಸಿಕ ರೂ. 3000 ಮತ್ತು ಡಿಪ್ಲೋಮಾ ಪಡೆದವರಿಗೆ ರೂ.1500 ನೀಡಲಾಗುವುದು.
ಅರ್ಹತೆ: 2023-24ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಉತ್ತೀರ್ಣ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ ಅಥವಾ ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.
ದಾಖಲೆಗಳು: ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಆಧಾರ್ ಜೋಡಣೆಯಾದ ಮೊಬೈಲ್ ಸಂಖ್ಯೆ ಅಗತ್ಯವಾಗಿರುತ್ತದೆ.
ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರತಿತಿಂಗಳು ನಿರುದ್ಯೋಗ ದೃಢೀಕರಣ ಕಡ್ಡಾಯವಿದ್ದು, ತಪ್ಪು ಮಾಹಿತಿ ನೀಡಿದಲ್ಲಿ ದಂಡ ವಿಧಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸೇವಾ ಸಿಂಧು ಪೋರ್ಟಲ್ ವಿಳಾಸ: https://sevasindhugs.karnataka.gov.in ಗೆ ಭೇಟಿ ನೀಡಬಹುದು ಹಾಗೂ ಬಳ್ಳಾರಿಯ ಹಳೆ ತಾಲೂಕು ಕಚೇರಿಯ ಹಿಂಭಾದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಬಹುದು ಅಥವಾ ಮೋ.ಸಂ: 9742718891, 8277000619, 9900827768, 6360408094 ಮತ್ತು 8861866752 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ವಿಜಯನಗರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ತಿಳಿಸಿದ್ದಾರೆ.