ಸರಿಯಾದ ಸಮಯಕ್ಕೆ ಬಸ್ ಇಲ್ಲವೆಂದು ವಿದ್ಯಾರ್ಥಿಗಳ ಪ್ರತಿಭಟನೆ
ಶಿರಹಟ್ಟಿ: ಬೆಳಗಿನ ಜಾವ ಗ್ರಾಮೀಣ ಹಾಗೂ ಪಟ್ಟಣದಿಂದ ಗದಗ ಹೋಗಲು ಬಸ್ ಗಳು ಇಲ್ಲ ನಾವು ಈ ವಿಷಯವಾಗಿ ಹಲವಾರು ಬಾರಿ ಡಿಪೋ ಮ್ಯಾನೇಜರ್ ಅವರಿಗೆ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಎಲ್ಲಾ ವಿದ್ಯಾರ್ಥಿಗಳು ತಮ್ಮ ಅಳುವಿನ ಮಾತನ್ನು ತೋಡಿಕೊಂಡರು.
ವಿದ್ಯಾರ್ಥಿಗಳಿಗೆ ಸಮಸ್ಯೆ ಎಂದ ಕೂಡಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘವು ಮುಂದೆ ಬರುವುದು. ಈ ಪ್ರತಿಭಟನೆಯ ನೇತೃತ್ವವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ ಸಂಗವು ವಹಿಸಿಕೊಂಡ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕೊಡಿಸುವ ಕೆಲಸ ಮಾಡುತ್ತಿದೆ.
ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಗದಗ್ ನಗರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ಅಲ್ಲದೇ ವಿದ್ಯಾರ್ಥಿಗಳು ಪ್ರತಿನಿತ್ಯ ಕಾಲೇಜಿಗೆ ತಡವಾಗಿ ಹೋಗುವುದರಿಂದ ಅವರಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಸರಿಯಾಗಿ ಕಾಲೇಜಿಗೆ ಬಂದಿರುವುದಿಲ್ಲ ನೀವು ಎಂದು ಹಾಲ್ ಟಿಕೆಟ್ ನೀಡುತ್ತಿಲ್ಲ.
ಇನ್ನಾದರೂ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ನೀಡುವವರೇ ಎಂದು ಕಾದು ನೋಡಬೇಕಾಗಿದೆ.
ಈ ಸಂದರ್ಭದಲ್ಲಿ ಸಿಪಿಐ ನಾಗರಾಜ್ ಮಾಡಳ್ಳಿ, ಪಿಎಸ್ಐ ಚೆನ್ನಯ್ಯ ದೇವುರು, ಎ ಎಸ್ಐ ಕಡಬಿನ್, ಕುಂದು ಕೊರತೆ ಸಮಿತಿಯ ಅಧ್ಯಕ್ಷ ಅಕ್ಬರ್ ಯಾದಗಿರಿ, ರಫೀಕ್ ಕೆರಿಮನಿ ಪಟ್ಟಣದ ಮುಖಂಡರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವರದಿ: ವೀರೇಶ್ ಗುಗ್ಗರಿ