Important News : ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಪ್ರೋತ್ಸಾಹಧನ ..!! : ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು ಪ್ರಸಕ್ತ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕುರಿತು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ತುಂಬಬಹುದು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ. 6.00 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ sevasindhu.karnataka.gov.in ಮೂಲಕ ದಿನಾಂಕ ಡಿಸೆಂಬರ್ 25ರೊಳಗಾಗಿ ಸಲ್ಲಿಸಬೇಕು.