LOCAL NEWS : ಡಾ.ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
ಕೊಪ್ಪಳ : ಡಾ.ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪರುಶುರಾಮ್ ಶೆಟ್ಟಪ್ಪನವರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ ಮಾನೆ, ಚುನಾವಣಾ ತಹಶಿಲ್ದಾರ ರವಿ ವಸ್ತ್ರದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸೇರಿದಂತೆ ಇತರೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು