LOCAL NEWS : ಡೆಂಗಿಜ್ವರ ಪತ್ತೆ ಪರಿಕ್ಷೆಗಾಗಿ ದರಗಳ ಮರು ನಿಗದಿ
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರಿಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್ಟ್‌ಗಳ ದರವನ್ನು ಮರುನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ ಲಿಂಗರಾಜು.ಟಿ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಎಲಿಸಾ (ELISA) ಹಾಗೂ ರಾಪಿಡ್ ಟೆಸ್ಟ್ (Rapid Test)ಗಳ ದರವನ್ನು ನಿಗದಿಗೊಳಿಸಲಾಗಿತ್ತು ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ಪ್ರಯೋಗಶಾಲೆಗಳ/ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಡೆಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತದೆ. ಆದರೆ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಡೆಂಗಿಜ್ವರ ಪತ್ತೆ ಹಚ್ಚುವ ಎಲಿಸಾ ಹಾಗೂ ರಾಪಿಡ್ ಟೆಸ್ಟ್‌ಗಳ ದರಗಳನ್ನು (ಸ್ಕ್ರೀನಿಂಗ್ ಟೆಸ್ಟ್) ಪರಿಷ್ಕರಿಸಿ, ದರ ನಿಗದಿಪಡಿಸುವಂತೆ ಸರ್ಕಾರವು ಆದೇಶಿಸಿದೆ.
ಡೆಂಗ್ಯೂ ಎಲಿಸಾ ಎನ್‌ಎಸ್1 ಪರೀಕ್ಷೆಗೆ ರೂ.300, ಎಲಿಸಾ ಐಜಿಎಂ ಪರೀಕ್ಷೆಗೆ ರೂ.300 ಹಾಗೂ ಸ್ಕ್ರೀನಿಂಗ್ ಟೆಸ್ಟ್: ರಾಪಿಡ್ ಕಾರ್ಡ್ ಟೆಸ್ಟ್ ಫಾರ್ ಎನ್‌ಎಸ್1 ಐಜಿಎಂ & ಐಜಿಜಿ ಪರೀಕ್ಷೆಗಳಿಗೆ ರೂ. 250 ದರಗಳನ್ನು ಮರುನಿಗದಿಗೊಳಿಸಿದೆ. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗಶಾಲೆಗಳು, ಡಯಾಗ್ನೋಸ್ಟಿಕ್ ಲ್ಯಾಬ್‌ಗಳು ಡೆಂಗಿ ಜ್ವರ ಪತ್ತೆ ಹಚ್ಚುವ ಪರೀಕ್ಷೆಯ ಪರಿಷ್ಕೃತ ದರಗಳ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಪ್ರಕಟಣೆ ತಿಳಿಸಿದೆ.