ಕುಕನೂರು : ಎ.ಐ.ಯು.ಟಿ.ಯು.ಸಿ ಗೆ ಸಂಯೋಜಿತಗೊAಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಮಾತನಾಡಿ ಆಶಾ ಕಾರ್ಯಕರ್ತೆಯರು ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲು ಆರೋಗ್ಯ ಇಲಾಖೆ ಜೊತೆಗೂಡಿ ಶ್ರಮಪಡುತ್ತಿದ್ದೇವೆ. ರಾಜ್ಯದಲ್ಲಿ ಸರಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿAದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ.
ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ಆನ್‌ಲೈನ್‌ನಲ್ಲಿ ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ’ ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ. ಇಲಾಖೆಯಿಂದ ಮತ್ತು ಸರ್ಕಾರದಿಂದ ಕೈಗೊಂಡ ಯಾವುದೇ ಕ್ರಮದಿಂದ ಸಮಸ್ಯೆ ಪರಿಹಾರವಾಗದೇ ಹಾಗೆಯೇ ಉಳಿದಿವೆ. ಅದರಿಂದಾಗಿ ಪ್ರತಿಯೊಬ್ಬ ಆಶಾ ಸಾವಿರಾರು ರೂ. ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ.
ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರ ಈಗ ನೀಡುತ್ತಿರುವ ರೂ.5000 ಮಾಸಿಕ ನಿಶ್ಚಿತ ಗೌರವಧನ ಮತ್ತು ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ.7000 ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆಯ ನೀಡಿರುವ ರೂ. 3000 ಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.15,000 ಗೌರವಧನ ನಿಗದಿ ಮಾಡಬೇಕು ಮತ್ತು ಇತರ 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, 13-14 ಫೆಬ್ರವರಿ 2024 ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಅನಿರ್ಧಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು, “ನನ್ನನ್ನು ನಂಬಿ, ಹೋರಾಟ ಹಿಂತೆಗೆದುಕೊಳ್ಳಿ, ಮುಂದಿನ ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದರು, ಅದೇ ರೀತಿ ಸನ್ಮಾನ್ಯ ಉಪ ಮುಖ್ಯಮಂತ್ರಿಗಳೂ “ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು” ನಂತರದ ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಇಲಾಖೆಯ ಸಚಿವರು, ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಹಾಗಾಗಿ ಮುಂದಿನ ಹಂತದ ಹೋರಾಟವನ್ನು ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಭಟನ ಉದ್ದೇಶಿಸಿ ಮಾತನಾಡಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಕೌಶಲ್ಯ ದೊಡ್ಡಗೌಡರ, ಗೌರವ ಅಧ್ಯಕ್ಷರಾದ ಶೋಭಾ ಹೂಗಾರ್, ಯಲಬುರ್ಗಾ ತಾಲೂಕ ಅಧ್ಯಕ್ಷರಾದ ಶಂಕ್ರಮ್ಮ ಹಳ್ಳಿಕೇರಿ, ಶಿವಮ್ಮ, ಅನ್ನಪೂರ್ಣ, ಗಂಗಾವತಿ ನಗರ ಘಟಕ ಅಧ್ಯಕ್ಷರಾದ ಕಾರ್ಯದರ್ಶಿಗಳಾದ ವಿಜಯಲಕ್ಷ್ಮಿ, ಲಾಲ್ ಬಿ,ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ಸುನ್ನಿತಾ, ಮುಖಂಡರುಗಳಾದ ಮಹಾದೇವಿ, ಶಭಾನ, ಅನ್ನಪೂರ್ಣ, ರೇಖಾ ಭಾಗ್ಯಶ್ರೀ, ಅಮರಮ್ಮ, ತಿಪ್ಪಮ್ಮ, ಗೀತಾ ಮಂಜುಳಾ ಅಂಜಿನಮ್ಮ, ರೇಣುಕಾ, ರಾಜೇಶ್ವರಿ, ಲಕ್ಷ್ಮಿ ಮುಂತಾದ 500ಕ್ಕೂ ಹೆಚ್ಚು ಜನ ಆಶಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕೆಲ ಪ್ರಮುಖ ಬೇಡಿಕೆಗಳು ಸಲ್ಲಿಸಲಾಯಿತು.
- ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಸಮ್ಮುಖದಲ್ಲಿ ನಡೆಯಬೇಕಾದ “ಆಶಾ ಕಾರ್ಯಕಾರ್ತೆಯರ ಕುದುಕೊರತೆ ಸಭೆ” ಈ ಕೂಡಲೇ ಸಭೆಯನ್ನು ಕರೆಯಿರಿ. ಆರ್.ಸಿ.ಹೆಚ್. ಪೋಸ್ಟೀಲ್ ನಲ್ಲಿ ಸಂಪೂರ್ಣ ಮಾಹಿತಿ ದಾಖಲಿಸುತ್ತಿಲ್ಲ ಇದರಿಂದಾಗಿ ದುಡಿದ ಹಣ ಕಾರ್ಯಕರ್ತೆಯರಿಗೆ ದಕ್ಕುತ್ತಿಲ್ಲ. ಆದುದರಿಂದ ದುಡಿದಷ್ಟು ಹಣ ಆಶಾಕಾರ್ಯಕರ್ತೆಯರಿಗೆ ದೊರಕುವಂತೆ ಕೂಡಲೇ ಕ್ರಮ ಕೈಗೊಳ್ಳುವ ಕುರಿತು.
- ಸ್ಟಾರ್ ಪೋನ್ ಬಳಕೆಗೆ ಸಂಬAಧಿಸಿದAತೆ ದಿ.28.11.2024ರ ಇಲಾಖೆಯ ಹೊಸ ಆದೇಶವು ಆಶಾಗಳದ್ದಲ್ಲದ ಕೆಲಸವನ್ನು ಆಶಾಗಳ ಮೇಲೆ ಹೇರುವ ಉದ್ದೇಶವಾಗಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆಯುವದು.
- ಕಫ (ಸ್ಪೋಟಮ್) ತರುವಂತೆ ಆಶಾ ಕಾರ್ಯಕರ್ತೆಯರನ್ನು ಒತ್ತಾಯಿಸಬಾರದು ಎಂದು ರಾಜ್ಯ ಮತ್ತು ಜಿಲ್ಲೆಯ ಆದೇಶ/ಸುತ್ತೋಲೆಗಳಿದ್ದು, ಅದನ್ನು ಪಿಎಚ್ ಮಟ್ಟದಲ್ಲಿ ಪಾಲಿಸುವಂತೆ ಕ್ರಮ ಕೈಗೊಂಡು, ಜಿ.ಪಿ.ಎಸ್ ಫೋಟೋ ಕಿರುಕುಳ ನಿಲ್ಲಿಸುವ ಕುರಿತು.
- ಜಿಲ್ಲಾ ಆಸ್ಪತ್ರೆಯಲ್ಲಿ ಆಶಾ ವಿಶ್ರಾಂತಿ ಕೊಠಡಿ ಒದಗಿಸಿ.
- ಫೈಲ್, ನೋಟ್ ಪುಸ್ತಕ, ಝರಾಕ್ಸ್ ಹಾಗೂ ಮತ್ತಿತರ ಸ್ಟೇಷನರಿ ಖರೀದಿಸಲು ಹಣಸಹಾಯ ಒದಗಿಸಿರಿ.
- ಪ್ರತಿ ತಿಂಗಳು ತಪ್ಪದೇ ಒಂದು ನಿರ್ದಿಷ್ಟ ದಿನಾಂಕದ0ದು ವೇತನ ಪಾವತಿಸಬೇಕು.