LOCAL NEWS : ಡಿ.21 ರಂದು ಜೆಸ್ಕಾಂ ಗ್ರಾಹಕರ ಸಂವಾದ ಸಭೆ..!!
ವಿಜಯನಗರ : ಹೊಸಪೇಟೆ ಗ್ರಾಮೀಣ ಉಪವಿಭಾಗದ ಕಚೇರಿಯಲ್ಲಿ ಜೆಸ್ಕಾಂ ಗ್ರಾಹಕರ ಸಂವಾದ ಸಭೆಯನ್ನು ಡಿ.21 ರಂದು ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಹೊಸಪೇಟೆ ತಾಲೂಕಿನ ವಿದ್ಯುತ್ ಗ್ರಾಹಕರು (ಹೊಸಪೇಟೆ ನಗರ ಹೊರತುಪಡಿಸಿ) ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.