ALERT NEWS : ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ..!

You are currently viewing ALERT NEWS : ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ..!

ALERT NEWS : ಪ್ರವಾಸೊದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ..!

ವಿಜಯನಗರ : ಪ್ರವಾಸೋದ್ಯಮ ಇಲಾಖೆಯಿಂದ 2024-25 ನೇ ಸಾಲಿನ ಎಸ್.ಸಿ.ಎಸ್.ಪಿ, ಹಾಗೂ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಪ್ರಭುಲಿಂಗ ಎಸ್.ತಳಕೇರಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿ ಡಿ.28 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.

ತರಬೇತಿ ಪಡೆಯುವ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ರಿಂದ 45 ವರ್ಷದೊಳಗಿರಬೇಕು.

ತರಬೇತಿಯ ವಿವರಗಳು :-

1. ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ (ಪುಡ್ ಅಂಡ್ ಬೆವರೇಜ್ ಸರ್ವೀಸ್ ಸ್ಟೇವರ್ಡ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ 10 ನೇ ತರಗತಿ ಉತ್ತಿರ್ಣರಾಗಿರಬೇಕು.

2. ಕೊಠಡಿ ಪರಿಚಾರಕ (ರೂಂ ಅಟೆಂಡಂಟ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ ಐದನೇ ತರಗತಿ ಉತ್ತೀರ್ಣರಾಗಿರಬೇಕು.

3. ಕಚೇರಿ ಮುಂಭಾಗದ ಸಹವರ್ತಿ (ಪ್ರಂಟ್ ಆಫೀಸ್ ಆಸೋಸಿಯೇಟ್) : ತರಬೇತಿಯ ಕಾಲಾವಧಿ 4 ತಿಂಗಳು ಹಾಗೂ ಪಿಯುಸಿ ಉತ್ತೀರ್ಣರಾಗಿರಬೇಕು.

4. ಬಹು ತಿನಿಸು ಕುಕ್ (ಮಲ್ಟಿ ಕ್ಯೂಸೆನ್ ಕುಕ್) : ತರಬೇತಿಯ ಕಾಲಾವಧಿ 5 ತಿಂಗಳು ಹಾಗೂ 8 ನೇ ತರಗತಿ ಉತ್ತೀರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08394-295640 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!