LOCAL NEWS : ನಾಳೆ ಕುಕನೂರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ..!!

You are currently viewing LOCAL NEWS : ನಾಳೆ ಕುಕನೂರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ..!!

ಪ್ರಜಾವೀಕ್ಷಣೆ ಸುದ್ದಿಜಾಲ :-

LOCAL NEWS : ನಾಳೆ ಕುಕನೂರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ..!!

ಕುಕನೂರು : ನಾಳೆ (ಡಿ.22 ಭಾನುವಾರ ದಂದು) ಕುಕನೂರ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಜೆಸ್ಕಾಂ ಅವರು ತಿಳಿಸಿದ್ದಾರೆ.

ನಾಳೆ (ಭಾನುವಾರದಂದು) 110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಯುಕ್ತ ಮುಂಜಾನೆ 10 ಘಂಟೆಯಿಂದ ಸಾಯಂಕಾಲ 05:00 ಘಂಟೆಯವರೆಗೆ ಕುಕನೂರ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಕಾರಣ ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನಾಗರಾಜ್ ಅವರು ಮನವಿ ಮಾಡಿದ್ದಾರೆ.

ಈ ಕಾಮಗಾರಿ ಮುಕ್ತಾಯವಾದ ಬಳಿಕ ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ಸರಬರಾಜು ಮಾಡಲಾಗುವುದು ಸದರಿ ಕಾಮಗಾರಿಯ ವೇಳೆ ಗ್ರಾಹಕರು ಯಾವುದೇ ವಿದ್ಯುತ್ ಕೆಲಸ ಕಾರ್ಯಗಳನ್ನು ಮಾಡಬಾರದು ಎಂದು ತಿಳಿಸಿದ್ದಾರೆ.

ಒಂದು ವೇಳೆ ವಿದ್ಯುತ್ ಕೆಲಸ ಮಾಡುತ್ತಿದ್ದರೆ, ಯಾವುದೇ ಅನಾಹುತಗಳು ಸಂಭವಿಸಿದರೆ, ಅದಕ್ಕೆ ಜೆಸ್ಕಾಂ ಕಾರಣವಲ್ಲ ಎಂದು ಹೇಳಿದ್ದಾರೆ.

Leave a Reply

error: Content is protected !!