JOB NEWS : ಗ್ರಾಮ ಆಡಳಿತಾಧಿಕಾರಿಗಳ 1:3 ಅಭ್ಯರ್ಥಿಗಳ ಪಟ್ಟಿ ಪ್ರಕಟ..!!
ವಿಜಯನಗರ : ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆ ಭರ್ತಿ ಮಾಡಲು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದ್ದು 1:3 ಅನ್ವಯ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಖಾಲಿ ಇದ್ದ ಒಂದು ಸಾವಿರ ಗ್ರಾಮಾಡಳಿತ ಅಧಿಕಾರಿಗಳ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಇದರಲ್ಲಿ ವಿಜಯನಗರ ಕಂದಾಯ ಘಟಕದಲ್ಲಿ ಖಾಲಿ ಇದ್ದ 13 ಹುದ್ದೆಗಳಿಗೆ ಪರೀಕ್ಷೆ ನಡೆದು 264 ಅರ್ಹ ಅಭ್ಯರ್ಥಿಗಳ ಪೈಕಿ ಸಾಮಾನ್ಯ-ಅಂಗವಿಕಲ ಹಾಗೂ ಮೀಸಲಾತಿಯನ್ವಯ 1:3 ಅನುಪಾತದಂತೆ ಅರ್ಹರಾದ 37 ಅಭ್ಯರ್ಥಿಗಳ ವಿವರವನ್ನು https://vijayanagara.nic.inhttps://vijayanagara.nic.in/ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಅರ್ಹರಾದ ಅಭ್ಯರ್ಥಿಗಳ ವಿದ್ಯಾರ್ಹತೆ, ಪ್ರಮಾಣ ಪತ್ರಗಳ ಮೂಲ ದಾಖಲೆಗಳ ಪರಿಶೀಲನೆಯನ್ನು 2025ರ ಜನವರಿ 8 ರಂದು, ಬೆಳಗ್ಗೆ 10 ಗಂಟೆಗೆ ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ 2ನೇ ಮಹಡಿಯ ಸಭಾಂಗಣದಲ್ಲಿ ಮೂಲದಾಖಲೆಗಳ ಪರಿಶೀಲನೆ ನಡೆಯಲಿದೆ. ಅರ್ಹರಾದ ಅಭ್ಯರ್ಥಿಗಳು ತಮ್ಮ ಮೂಲದಾಖಲೆಗಳೊಂದಿಗೆ ದೃಢೀಕೃತ ದ್ವಿಪ್ರತಿ, ಎರಡು ಪಾಸ್‌ಪೋರ್ಟ್ ಸೈಜ್ ಭಾವಚಿತ್ರಗಳೊಂದಿಗೆ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಲು ತಿಳಿಸಲಾಗಿದೆ. ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದಲ್ಲಿ ಎರಡನೇ ಅವಕಾಶ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.