LOCAL NEWS : ಶಾ ರಾಜೀನಾಮೆಗೆ ಒತ್ತಾಯಿಸಿ ಪಟ್ಟಣ ಬಂದ್ ಮಾಡುವ ಮೂಲಕ ದಂಡಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗೆ ಮನವಿ..!!
ಶಿರಹಟ್ಟಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಜರುಗಿತು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ದಲಿತರ ಪರ ಸಂಘಟನೆಗಳಿಂದ ಬ್ರಹತ್ ಪ್ರತಿಭಟನೆ ನಡೆಯಿತು.
ಶಿರಹಟ್ಟಿ ಪಟ್ಟಣದಲ್ಲಿ ಇಂದು ಅಂಗಡಿ ಮುಂಗಟ್ಟುಗಳು ಸೇರಿದಂತೆ ಎಲ್ಲವೂ ಬಂದ್ ಮಾಡಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆಯಲ್ಲಿ ಅಮಿತ್ ಷಾ ಪ್ರತಿಕೃತಿ ದಹನ ಮಾಡಿ ಪ್ರತಿಭಟನಾಕರರು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆ ಪಟ್ಟಣದ ಪಕ್ಕಿರೇಶ್ವರ ಮಠ ದಿಂದ ಪ್ರಾರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಲೂಕ್ ದಂಡಾಧಿಕಾರಿಗಳ ಕಚೇರಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ಕೊಡುವಂತೆ ದಂಡಾಧಿಕಾರಿಗಳ ಮುಖಾಂತರ ರಾಷ್ಟ್ರ ಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರುಗಳಾದ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ,ಕೆ ಪೀ ಸಿ ಸಿ ಪ್ರಧಾನ ಕಾರ್ಯದರ್ಶಿ ಸುಜಾತ ದೊಡ್ಡಮನಿ, ಹುಮಾಯನ ಮಾಗಡಿ, ಎಸ್ ಸಿ ಶಿರಹಟ್ಟಿ ಬ್ಲಾಕ್ ಅಧ್ಯಕ್ಷ ಮುತ್ತುರಾಜ್ ಭಾವಿಮನಿ,ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ಪ್ರತಿಭಟನೆ ಯಲ್ಲಿ ಬಾಗಿ ಯಾಗಿದ್ದವು.
ವರದಿ : ವೀರೇಶ್ ಗುಗ್ಗರಿ