JOB ALERT : ಡಿ.29 ರಂದು ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ.ಬಿ.45ವೃಂದದ ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆ
ವಿಜಯನಗರ : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್‌ನ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಡಿ.29 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಹೊಸಪೇಟೆ ಹಾಗೂ ಹಗರಿಬೊಮ್ಮನಹಳ್ಳಿಯಲ್ಲಿ ನಡೆಯಲಿರುವ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಸಿದ್ದತೆ ಮಾಡಲಾಗಿದೆ. ಡಿ.29 ರಂದು ಪತ್ರಿಕೆ-1 ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಪತ್ರಿಕೆ-2 ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಮತ್ತು ಕಂಪ್ಯೂಟರ್, ಸೈಬರ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.