ಪ್ರಜಾವೀಕ್ಷಣೆ ಸುದ್ದಿ :-
BIG NEWS : ಬಿಜೆಪಿಯ ಅಧ್ಯಕ್ಷರು & ರಾಷ್ಟ್ರೀಯ ಮಂಡಳಿಯ ಚುನಾವಣೆ : ಚುನಾವಣಾ ಅಧಿಕಾರಿಗಳ ನೇಮಕ
ನವದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯ ಅಧ್ಯಕ್ಷರು ಮತ್ತು ರಾಷ್ಟ್ರೀಯ ಮಂಡಳಿ ಸದಸ್ಯರ ಆಯ್ಕೆಗಾಗಿ ಪ್ರಕ್ರಿಯೆ ನಡೆಸುವ ಸಲುವಾಗಿ ಚುನಾವಣಾ ಅಧಿಕಾರಿಗಳನ್ನ ನೇಮಿಸಿ ಪಟ್ಟಿ ಘೋಷಣೆ ಮಾಡಿದೆ.
ಕೇಂದ್ರ ಸಚಿವರು ಸೇರಿದಂತೆ ಹಿರಿಯ ನಾಯಕರಿಗೆ ಆಯಾ ರಾಜ್ಯಗಳಲ್ಲಿ ಆಂತರಿಕ ಚುನಾವಣೆಗಳನ್ನು ಸುಗಮವಾಗಿ ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಗುಜರಾತ್‌ಗೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರ ನೇಮಕ, ಕರ್ನಾಟಕಕ್ಕೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್, ಬಿಹಾರಕ್ಕೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಮಧ್ಯಪ್ರದೇಶಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಈ ಕುರಿತು ANI ತನ್ನ ‘X’ನಲ್ಲಿ ಬರೆದು ಕೊಂಡಿದೆ.