ಪತ್ರಕರ್ತ ಬಿ.ಎ.ನಂದಿಕೋಲಮಠ ನಿಧನ. ಲಿಂಗಸುಗೂರು : ತಾಲ್ಲೂಕು ಪ್ರಜಾವಾಣಿ ವರದಿಗಾರ ಬಿ.ಎ.ನಂದಿಕೋಲಮಠ (58) ಅವರು ತೆಲಂಗಾಣದ ದೇವರಕದ್ರ ಹತ್ತಿರ ಮಂಗಳವಾರ ಟಿಪ್ಪರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಲಿಂಗಸುಗೂರು ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.