LOCAL NEWS  : ಜನವರಿ 11ಕ್ಕೆ ಬಸವ ಪಟ ಆರೋಹಣ ಕಾರ್ಯಕ್ರಮ

You are currently viewing LOCAL NEWS  : ಜನವರಿ 11ಕ್ಕೆ ಬಸವ ಪಟ ಆರೋಹಣ ಕಾರ್ಯಕ್ರಮ

ಪ್ರಜಾವೀಕ್ಷಣೆ ಸುದ್ದಿಜಾಲ :-

LOCAL NEWS  : ಜನವರಿ 11ಕ್ಕೆ ಬಸವ ಪಟ ಆರೋಹಣ ಕಾರ್ಯಕ್ರಮ

ಕೊಪ್ಪಳ : ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜನವರಿ 1 1ರಂದು ಸಂಜೆ 5:00ಗಂಟೆಗೆ ಬಸವಪಟ ಆರೋಹಣ’ ಎಂಬ ಧಾರ್ಮಿಕ ಕಾರ್ಯಕ್ರಮವೂ ಜರುಗುತ್ತದೆ.

ಭಕ್ತರು ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪ್ರಣವ ಮಂತ್ರವಿರುವ ಬಸವಪಟಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಿ, ನೈವೇದ್ಯ ಮಾಡಿ ಆ ಬಳಿಕ ಅದನ್ನು ಶ್ರದ್ಧೆಯಿಂದ ತಲೆಯ ಮೇಲೆ ಹೊತ್ತುಕೊಂಡು ಗವಿಮಠದ ಕರ್ತೃ ಗದ್ದುಗೆಯ ಸುತ್ತ ಐದು ಸಾರಿ ಪ್ರದಕ್ಷಿಣೆ÷ ಹಾಕುತ್ತಾ ಗವಿಸಿದ್ಧೇಶ್ವರನ ಜಯಘೋಷಗಳೊಂದಿಗೆ ಕರ್ತೃ ಗದ್ದುಗೆಯ ಮುಂಭಾಗದ ಎದುರಿಗಿರುವ ಶಿಲಾಸ್ತಂಭಕ್ಕೆೆ್ ಬಸವ ಪಟವನ್ನು ಆರೋಹಣಗೊಳಿಸುವುದು.

ಇದುವೇ ‘ಬಸವ ಪಟ ಆರೋಹಣ’. ಬಸವ ಪಟ ಆರೋಹಣ ಮಾಡುವ ಉದ್ದೇಶ: ನಮ್ಮದು ಕೃಷಿ ಪ್ರಧಾನ ನಾಡು.ಆ ಕಾರಣಕ್ಕಾಗಿ ನಂದಿ, ಈಶ್ವರ, ಸೂರ್ಯ, ಚಂದ್ರ, ವರುಣ, ಪೃಕೃತಿ ಇವುಗಳಿಗೆ ಪೂಜೆ ಸಲ್ಲಿಸುವದು ನಮ್ಮ ಪ್ರಥಮ ಕರ್ತವ್ಯವಾಗಿದೆ.  ಗವಿಸಿದ್ಧನ ಸನ್ನಿಧಿಯ ಈ ನಾಡಿನಲ್ಲಿ ಸದಾಕಾಲ ಉತ್ತಮ ಮಳೆ, ಉತ್ತಮ ಬೆಳೆ ಬಂದು ರೈತಾಪಿ ವರ್ಗಕ್ಕೆ ಸುಖ, ಶಾಂತಿ, ಸಮೃದ್ಧಿ ಸದಾ ದೊರೆಯಲೆಂಬ ಆಶಯಕ್ಕಾಗಿ ‘ಬಸವ ಪಟ ಆರೋಹಣ’ ಕಾರ್ಯಕ್ರಮವು ಜರುಗುತ್ತದೆ.

ಮಠದ ಜಾತ್ರಾ ಪರಂಪರೆಯಲ್ಲಿ ಬಸವ ಪಟ ಆರೋಹಣ ಕಾರ್ಯಕ್ರಮದ ಮೂಲಕವೇ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಂತಾಗುತ್ತದೆ. ಹಾಗೆಯೇ ಆಗಮಿಸಿದ ಶಿವಯೋಗಿಗಳಿಗೆ ಹಾಗೂ ಜಂಗಮ ಪುಂಗವರಿಗೆ ಪ್ರಸಾದ ಸೇವಾ ಕಾರ್ಯವು ಸಹ ಅನುಚಾನವಾಗಿ ನಡೆದುಬಂದಿದೆ.

ಹೆಚ್ಚಿನ ಮಾಹಿತಿಗಾಗಿ 8123932545 ಈ ಮೋಬೈಲ್ ಸಂಖ್ಯೆಗೆ ಸಂಪರ್ಕಿಸಲು ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

error: Content is protected !!