LOCAL NEWS : ನಾಳೆ ಸಂಜೆ 5 ಗಂಟೆಗೆ ಗವಿಸಿದ್ಧೇಶ್ವರ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ..!!
ಕೊಪ್ಪಳ : ಸಂಸ್ಥಾನಶ್ರೀ ಗವಿಮಠದ 11ನೇ ಪೀಠಾಧೀಶರಾಗಿದ್ದ ಗವಿಸಿದ್ದೇಶ್ವರ ಮಹಾಸ್ವಾಮಿಗಳವರು ಶ್ರೀ ಗವಿಮಠಕ್ಕೆ ಆಗಮಿಸುವ ಪೂರ್ವದಲ್ಲಿ ಕೊಪ್ಪಳದ ಜಡೇಗೌಡರ ಮನೆಯಲ್ಲಿ ಲಿಂಗಾನುಷ್ಠಾನ ನಿರತರಾಗಿದ್ದರು. ಶ್ರೀ ಗವಿಮಠಕ್ಕೆ ಬರುವ ಪೂರ್ವದಲ್ಲಿ ಗೌಡರ ಧರ್ಮಪತ್ನಿಯವರಿಗೆ ತಮ್ಮ ಶಿಖೆ (ಜಡೆ)ಯನ್ನೇ ತೆಗೆದುಕೊಟ್ಟರು. ಅಂದಿನಿಂದ ಆ ಮನೆತನಕ್ಕೆ ಜಡೇಗೌಡ್ರ ಎಂಬ ಹೆಸರು ಬಂದಿದೆ.
ಈ ಕಾರಣಕ್ಕಾಗಿ ಶ್ರೀಮಠದಲ್ಲಿ ಪೂಜೆಗೊಂಡ ಗವಿಸಿದ್ಧೇಶ್ವರ ಮೂರ್ತಿಯನ್ನು ಜಡೇಗೌಡರ ಮನೆಯಲ್ಲಿ ಮೂಹರ್ತಗೊಳಿಸಿ ಪೂಜಾದಿಗಳನ್ನು ಸಲ್ಲಿಸಿದ ತರುವಾಯ ವಾದ್ಯಗಳ ಸಮೇತ ಪಲ್ಲಕ್ಕಿಯನ್ನು ಕೊಪ್ಪಳದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮುಖಾಂತರ ಶ್ರೀ ಗವಿಮಠಕ್ಕೆ ತರುವದು ಸಂಪ್ರದಾಯವಾಗಿದೆ. ಜಡೇಗೌಡರ ಮನೆಯಲ್ಲಿಯೇ ಪೂಜಾದಿಗಳನ್ನು ತೀರಿಸಿಕೊಂಡು ಬಂದ ಗವಿಸಿದ್ಧೇಶ್ವರನನ್ನು ಪುನಃ ಆ ಮನೆಯಿಂದಲೇ ಆಮಂತ್ರಿಸುವ ಹಾಗೂ ಕರೆತರುವ ಹಿನ್ನಲೆಯು ಇದರಲ್ಲಿ ಒಳಗೊಂಡಿದೆ.
ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು 8123932545, 9242181322 ಶ್ರಿ ಗವಿಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.