2023-24ನೇ ಸಾಲಿನಲ್ಲಿ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು. ಕುಕನೂರು : 2023-24ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗೈದ ತಾಲೂಕಿನ ನಿಂಗಾಪುರ ಗ್ರಾಮದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಲಾಗಿದೆ.
ಜಿಲ್ಲೆಯ ಕುಕನೂರು ತಾಲೂಕಿನ ನಿಂಗಾಪುರ ಗ್ರಾಮ ಅತ್ಯಂತ ಚಿಕ್ಕ ಗ್ರಾಮವಾಗಿದ್ದರು ಸಹಿತ, ಇಂತಹ ಪ್ರತಿಭೆಗಳಾದ ಸುಶ್ಮಿತಾ ಕನಕರಾಯ ಪೂಜಾರ ಕಳೆದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600ಕ್ಕೆ 584 ಅಂಕಗಳನ್ನು ಪಡೆದು ಉತ್ತಮ ಸಾಧನೆಗೈದಿದ್ದಾಳೆ. ಅದೇ ರೀತಿ ಅವಳ ಸಹೋದರ ಅಭಿಷೇಕ ಕನಕರಾಯ ಪೂಜಾರ್ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 586 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದು ಇಬ್ಬರು ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರ ಸಾಧನೆಯನ್ನು ಮೆಚ್ಚಿ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶ್ರೀವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ಅತ್ಯುತ್ತಮ ಅಂಕ ಪಡೆದ ಹಿನ್ನೆಲೆಯಲ್ಲಿ ಶನಿವಾರ ವಿದ್ಯಾಲಯದ ಆವರಣದಲ್ಲಿ ಜರುಗಿದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ನಗದು ನೀಡಿ ಸನ್ಮಾನಿಸಿ ಗೌರವಿಸಲಾಗಿದೆ.
ನಿಂಗಾಪುರ ಗ್ರಾಮದಲ್ಲಿರುವ ವಿದ್ಯಾರ್ಥಿಗಳ ತಂದೆ ತಾಯಿಗಳು ಹಾಗೂ ಗ್ರಾಮದ ಪ್ರಮುಖರು ವಿದ್ಯಾರ್ಥಿಗಳ ಸಾಧನೆ ಮೆಚ್ಚಿಕೊಂಡು ಹರ್ಷ ವ್ಯಕ್ತಪಡಿಸಿರುತ್ತಾರೆ ಹಾಗೂ ಹಾಗೂ ವಿದ್ಯಾರ್ಥಿಗಳ ಪೋಷಕರಾದ ಕನಕರಾಯ ಪೂಜಾರ ಮಾತನಾಡುತ್ತಾ ಶ್ರೀವಿದ್ಯಾನಿಕೇತನ ವಿದ್ಯಾ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ನೆಕ್ಕಂಟಿ ಸೂರಿಬಾಬು ಅವರ ವಿದ್ಯಾರ್ಥಿ ಪರ ಕಾಳಜಿ ಅಮೋಘವಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ ತಲಾ 50, ಸಾವಿರ ರೂಪಾಯಿಗಳ ನಗದು ನೀಡಿರುವುದು ನಿಜಕ್ಕೂ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಮಾರ್ಗ ಸೂಚಿಯಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.