BIG NEWS : ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ..!! : ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31 ರವರೆಗೆ ಅವಕಾಶ!
ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ದೊರೆತಿದ್ದು, ಹೆಸರು ಸೇರ್ಪಡೆ,ತಿದ್ದುಪಡಿಗೆ ಇದೇ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ಇದೆ.
ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಜ. 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಈ ಸೇವೆಯನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಒಟ್ಟನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ.